ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಲಿ
Oct 21 2024, 12:41 AM ISTಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್ಸಿ/ಎಸ್ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.