ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನಾನಾ ಯೋಜನೆ
Oct 06 2024, 01:26 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಡಾ.ಬಿ.ಆರ್.ಅಂಬೇಡ್ಕರ ನಿಜವಾದ ಶೋಷಿತ ಹಾಗೂ ಬಡ ಸಮಾಜಗಳ ಮಕ್ಕಳು ಶಿಕ್ಷಣವಂತರಾಗಲಿ ಎಂಬ ಉದ್ದೇಶದಿಂದ ಆಯಾ ಸಮಾಜಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಗ್ರಾಮೀಣ ಮಟ್ಟದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಸತಿ ನಿಲಯ ಸೇರಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.