ಅರಸುರವರು ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕರು
Aug 22 2024, 12:50 AM ISTಬಡವರ ಮತ್ತು ತುಳಿತಕ್ಕೊಳಗಾದವರ ಧ್ವನಿಯಾಗಿ ದೇವರಾಜ ಅರಸರು ಕೆಲಸ ಮಾಡಿದರು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅರಸುರವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.