ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ಜೆಡಿಎಸ್ ಪ್ರತಿಭಟನೆ
Jul 01 2025, 12:47 AM ISTರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ ಹೆಚ್ಚಾಗಿರುವುದನ್ನು ಹಾಗೂ ಆಡಳಿತದ ವೈಫಲ್ಯ ಖಂಡಿಸಿ ರಾಜ್ಯ ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಮಳೆಯಿಂದಾಗಿ ಹಾನಿಯಾಗಿರುವ ಮನೆಗಳಿಗೆ ಪ್ರತಿ ಮನೆಗೆ 5 ಲಕ್ಷ ರು.ನಂತೆ ಪರಿಹಾರ ಮೊತ್ತವನ್ನು ಕೂಡಲೇ ಸರ್ಕಾರ ಘೋಷಿಸಲು ಒತ್ತಾಯಿಸುತ್ತೇವೆ ಎಂದು ಹೇಳಿದರು.