ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಸುರಕ್ಷತೆ ಗ್ಯಾರಂಟಿ: ಮಂಗಳ ನವೀನ್ಕುಮಾರ್
May 21 2024, 12:30 AM ISTರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ.