ಯತ್ನಾಳ್, ಸಿ.ಟಿ.ರವಿ ಯಾರೂ ಇವರಿಗೆ ಲೆಕ್ಕಕ್ಕೇ ಇಲ್ಲವಾಗಿದೆ. ನಿಮಗೆ ಹಿಂದುತ್ವ ಬೇಕು, ಆದರೆ ಹಿಂದುತ್ವದ ಪರ ಇರುವವರು ಬೇಡ. ಹೀಗೆ ಹಿಂದುತ್ವದ ನಾಯಕರ ತುಳಿಯುತ್ತಾ ಹೋದರೆ ಪಕ್ಷ ಉಳಿಯುತ್ತಾ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಲ್ಲಿ ಉದ್ಭವಿಸಿದ್ದ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಪುನರಾವರ್ತಿತಗೊಂಡಿದ್ದು, ಪಕ್ಷದ ವರಿಷ್ಠರು ರಾಜ್ಯ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ