ರಾಜ್ಯ ಬಜೆಟ್ ನಲ್ಲಿ ಮಧ್ಯ ಕರ್ನಾಟಕಕ್ಕೆ ದ್ರೋಹ: ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್
Mar 03 2024, 01:35 AM ISTಭದ್ರಾ ಮೇಲ್ದಂಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿ ಮಾತಿನಲ್ಲೂ ಕೇಂದ್ರ ಸರ್ಕಾರ 5,300 ಕೋಟಿ ರುಪಾಯಿ ಕೊಟ್ಟಿಲ್ಲವೆಂದು ಆಪಾದನೆ ಮಾಡಿದರು. ಆದರೆ ರಾಜ್ಯ ಸರ್ಕಾರದ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲ. ಬಜೆಟ್ಲ್ಲಿ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಹಣ ಕಾಯ್ದಿರಿಸಿಲ್ಲ. ಕಾಂಗ್ರೆಸ್ ಸರ್ಕಾರ ಚಿತ್ರದುರ್ಗ ಜಿಲ್ಲೆಗೆ ಶಾಪವಾಗಿ ಪರಿಣಮಿಸಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಂತ್ರಿಗಳು ಗಮನ ಹರಿಸುತ್ತಿಲ್ಲ.