ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ
Nov 17 2023, 06:45 PM ISTತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಶ್ವರ ಉದ್ಯಾನವನದ ಮುಂಭಾಗದಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.