ಬಂಗಾಳದಲ್ಲಿ ಪ್ರಯಾಣಿಕ ರೈಲಿಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದ್ದು, 60ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಸಿಗ್ನಲ್ ವೈಫಲ್ಯದಿಂದ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ದುರಂತದಲ್ಲಿ 9ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಸೋಮವಾರ ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ರೈಲು ಅಪಘಾತಕ್ಕೆ ಸ್ಟೇಷನ್ ಮಾಸ್ಟರ್ ಮಾಡಿದ ಎಡವಟ್ಟು, ಈ ಅಪಘಾತಕ್ಕೆ ಕಾರಣವಾಗಿದೆ ಎಂದು ರೈಲ್ವೆ ಆಂತರಿಕ ದಾಖಲೆಗಳಲ್ಲಿ ಕಂಡುಬಂದಿದೆ.
ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಭೀಕರ ರೈಲ್ವೆ ಅಪಘಾತ ನಡೆದ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದಾರೆ.ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆ ಕಿರಿದಾಗಿದ್ದ ಕಾರಣ, ಕೇಂದ್ರ ಸಚಿವ ಮೋಟಾರ್ ಬೈಕ್ನಲ್ಲಿ ಘಟನಾ ಸ್ಥಳ ತಲುಪಿದ್ದಾರೆ.