ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ
Mar 12 2024, 02:04 AM ISTಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.