26ರಂದು 4 ರೈಲು ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಶಂಕು
Feb 21 2024, 02:01 AM ISTಸುಮಾರು ₹26 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನಾಲ್ಕು ನಿಲ್ದಾಣಗಳಾದ ಶಿವಮೊಗ್ಗ, ಅರಸಾಳು, ಸಾಗರ-ಜಂಬಗಾರು ಹಾಗೂ ತಾಳಗುಪ್ಪ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಫೆ.26ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಮೃತ್ ಭಾರತ್ ಯೋಜನೆಯಡಿ ಫೆ.26ರಂದು ನಡೆಯುವ ಸಮಾರಂಭದಲ್ಲಿ ರಾಜ್ಯದ 55 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಮುಂದಿನ ಎರಡು ವರ್ಷದೊಳಗೆ ಈ ಕಾಮಗಾರಿ ಕೆಲಸಗಳು ಮುಗಿಯಲಿವೆ ಎಂದು ಇಲಾಖೆ ಸಹಾಯಕ ವಿಭಾಗೀಯ ಅಭಿಯಂತರ ಹರಿರಾಮ್ ಮೀನಾ ಸಾಗರ ಪಟ್ಟಣದಲ್ಲಿ ಹೇಳಿದ್ದಾರೆ.