ರೈಲ್ವೆ ಕಾಮಗಾರಿಯಿಂದ ಸ್ಥಳೀಯರಿಗೆ ತೊಂದರೆ
Sep 10 2025, 01:03 AM ISTರೈಲ್ವೆ ಕಾಮಗಾರಿಯಿಂದ ಸುತ್ತಮುತ್ತಲಿನ ಎಂಟು ಹಳ್ಳಿಗಳ ಜನತೆಗೆ ತೊಂದರೆ ಉಂಟಾಗಿದೆ. ಕೈಗಾರಿಕಾ ಪ್ರದೇಶಕ್ಕೆ ತೆರಳುವ ಕಾರ್ಮಿಕರು, ನಗರ ಪ್ರದೇಶ ಮತ್ತು ಬೈಪಾಸ್ ರಸ್ತೆಯಿಂದ ಸಂಚಾರ ನಡೆಸುವ ವಾಹನ ಸವಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ಥಳದಲ್ಲಿಯೇ ಜನರ ಅಹವಾಲುಗಳನ್ನು ಆಲಿಸಿದ ಶಾಸಕ ಸ್ವರೂಪ್, ತಕ್ಷಣ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರ ಪರವಾಗಿ ಕಟುವಾಗಿ ಮಾತನಾಡಿ, ಕಾಮಗಾರಿ ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿದರು.