ರೈಲ್ವೆ ಟ್ರ್ಯಾಕ್ ಸಮೀಪ ಹುಂಡಿ ಪತ್ತೆ
Aug 10 2024, 01:30 AM ISTಹೊಳೆನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಮೀಪದ ರೈಲ್ವೆ ಟ್ರ್ಯಾಕ್ ಪಕ್ಕದ ಜಾಗದಲ್ಲಿ ದೇವಾಲಯದ ಹುಂಡಿಯೊಂದು ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಹುಂಡಿಯನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳ್ಳರು ದೇವಾಲಯದಲ್ಲಿ ಕದ್ದ ಹುಂಡಿಯಲ್ಲಿದ್ದ ಹಣವನ್ನು ದೋಚಿ, ನಂತರ ಹುಂಡಿಯನ್ನು ಬಿಸಾಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.