ಕೆಎಸ್ಸಾರ್ಟಿಸಿ ಬಸ್ ಸೇವೆಯನ್ನು ಮತ್ತಷ್ಟು ನಿಖರ ಮತ್ತು ಉತ್ತಮಗೊಳಿಸುವ ಉದ್ದೇಶದೊಂದಿಗೆ ‘ಕಮಾಂಡ್ ಕಂಟ್ರೋಲ್ ಸೆಂಟರ್’ ಸ್ಥಾಪನೆಗೆ ಯೋಜಿಸಲಾಗುತ್ತಿದ್ದು, ಆ ಮೂಲಕ ನಿಗಮದ ಏಳು ಸಾವಿರಕ್ಕೂ ಹೆಚ್ಚಿನ ಬಸ್ಗಳ ನಿಖರ ಮಾಹಿತಿ ಪ್ರಯಾಣಿಕರಿಗೆ ಕ್ಷಣಕ್ಷಣಕ್ಕೂ ದೊರೆಯುವಂತೆ ಮಾಡುವ ಗುರಿ ಹೊಂದಲಾಗಿದೆ.