ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಬೇಕೆಂದು ಸಂಸದ ಜಗದೀಶ ಶೆಟ್ಟರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದರು.
ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್/ಹಿಂದಿ ಭಾಷೆ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.
ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಶಾಕ್ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್ ನೀಡಿದೆ.