ರೈಲ್ವೆ ಎಸಿ ಬೋಗಿಗಳಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರ ಬಂಧನ
Mar 27 2024, 01:15 AM ISTಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಗಾಯಿತ್ರಿ ಅಲಿಯಾಸ್ ರೂಪಾ ಹಾಗೂ ಸಂಧ್ಯಾ ಅಲಿಯಾಸ್ ಶರಣ್ಯಾ ಬಂಧಿತರಾಗಿದ್ದು, ಆರೋಪಿಗಳಿಂದ 38 ಲಕ್ಷ ರು. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮುರುಡೇಶ್ವರ-ಬೆಂಗಳೂರು ಎಕ್ಸ್ಪ್ರೆಸ್ನ ಎಸಿ ಬೋಗಿಯಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳವಾಗಿದ್ದವು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.