65 ವರ್ಷಗಳಲ್ಲಿ ಆಗದ ರೈಲ್ವೆ ಅಭಿವೃದ್ಧಿ 10 ವರ್ಷದಲ್ಲಾಗಿದೆ: ಸಂಸದ ರಾಘವೇಂದ್ರ
Feb 27 2024, 01:34 AM ISTದೇಶದ ರೈಲ್ವೆ ಸಂಪರ್ಕ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯ ಬಂದು 65 ವರ್ಷಗಳಲ್ಲಿ ಆಗದ ಅಭಿವೃದ್ಧಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ 10 ವರ್ಷಗಳಲ್ಲಿ ಮಾಡಿದೆ. ಹಿಂದಿನ ವರ್ಷಗಳ ರೈಲ್ವೆ ಕಾಮಗಾರಿಗಳಿಗೆ ಹೋಲಿಸಿದರೆ, ಕಳೆದ 10 ವರ್ಷದಲ್ಲಿ ಶೇ.100ರಷ್ಟು ಹೆಚ್ಚಳವಾಗಿದೆ. 554 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಜೊತೆಗೆ 1500 ಮೇಲ್ಸೇತುವೆ, ಕೆಳಸೇತುವೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುತ್ತಿರುವ ಐತಿಹಾಸಿಕ ದಿನವಿದು ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.