ರೈಲ್ವೆ ಮಾರ್ಗದಲ್ಲಿ ವಿಧ್ವಂಸಕ ಕೃತ್ಯಕ್ಕೆ ಯತ್ನ

Nov 16 2023, 01:15 AM IST
ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ರೈಲು ನಂಜನಗೂಡು ಮತ್ತು ಕಡಕೊಳ ರೈಲ್ವೆ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಪಘಾತಕ್ಕೀಡಾಗಿವುದನ್ನು ಲೋಕೋ ಪೈಲಟ್ ತಪ್ಪಿಸಿದ್ದಾರೆ.ರೈಲ್ವೆ ಎಂಜಿನ್ ನ ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ರೈಲನ್ನು ಧ್ವಂಸಗೊಳಿಸುವ ದುರುದ್ದೇಶಪೂರಿತ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂದು ಗುರುತಿಸಲಾದ ಮೂವರನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್.ಪಿ.ಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿ.ಆರ್.ಪಿ) ಬಂಧಿಸಿದ್ದಾರೆ. ಈ ಮೂವರು ಉದ್ದೇಶ ಪೂರ್ವಕವಾಗಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು.