ಸರ್ಕಾರಿ ಬಸ್, ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ: 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Jan 21 2025, 12:32 AM ISTಮಾಗಡಿ- ಬೆಂಗಳೂರು ಮುಖ್ಯರಸ್ತೆಯ ಚೋಳನಾಯಕನಹಳ್ಳಿ ಸಮೀಪ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಸೋಮವಾರ ಸಂಜೆ ಬೆಂಗಳೂರಿಗೆ ತೆರಳುವ ಮತ್ತು ಮಾಗಡಿಗೆ ತೆರಳುವ ಹಲವು ವಾಹನಗಳಿಂದ ಅಪಘಾತದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಜೆಸಿಬಿ ಯಂತ್ರದ ಮೂಲಕ ಎರಡು ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಟ್ರಾಫಿಕ್ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.