ದೋಣಿಗಲ್‌ ಬಳಿ ಹಳ್ಳಕ್ಕೆ ಉರುಳಿದ ಲಾರಿ

Aug 23 2024, 01:05 AM IST
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕಂದಕಕ್ಕೆ ಬಿದ್ದಿದ್ದರಿಂದ ಲಾರಿ ಚಾಲಕ ಸೇರಿ ಮೂವರಿಗೆ ಗಾಯಗಳಾದ ಘಟನೆ ಸಕಲೇಶಪುರ ತಾಲೂಕಿನ ಶಿರಾಡಿಘಾಟಿಯ ದೋಣಿಗಲ್‌ ಬಳಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿ ತಡರಾತ್ರಿ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ಸಿಗದೆ ಕಂದಕಕ್ಕೆ ಪಲ್ಟಿಯಾಗಿದೆ. ಕೆಲ ದಿನಗಳ ಹಿಂದೆ ಭಾರಿ ಮಳೆಯಿಂದ ನೀರು ಹರಿದು ಹೆದ್ದಾರಿ ಪಕ್ಕದಲ್ಲಿ ಬೃಹತ್ ಗುಂಡಿ ಸೃಷ್ಟಿಯಾಗಿತ್ತು. ರಾತ್ರಿ ವೇಳೆ ಲಾರಿ ಚಾಲಕನಿಗೆ ರಸ್ತೆ ಸರಿಯಾಗಿ ಕಾಣದ ಕಾರಣ ಲಾರಿ ಮಗುಚಿಬಿದ್ದಿದೆ. ಲಾರಿಯಲ್ಲಿ ಸಿಲುಕಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಅತಾ ಉಲ್ಲರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.