2019ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಳ್ಳುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ 2024ರಲ್ಲಿ ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ. ಈ ಫಲಿತಾಂಶದೊಂದಿಗೆ ಎಚ್.ಡಿ.ಕುಮಾರಸ್ವಾಮಿ ಹಣೆಬರಹದೊಂದಿಗೆ ಜೆಡಿಎಸ್ ಭವಿಷ್ಯವೂ ನಿರ್ಧಾರವಾಗಲಿದೆ.
ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ