ಈ ಹಿಂದೆ ಎರಡು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದೇನೆ. ಆಗ ನನಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂಬ ಆಸೆಯಿತ್ತು. ಆದರೆ, ಈಗ ಅಂಥ ಆಸೆ ಇಲ್ಲ. ಇನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
‘ಸಂವಿಧಾನವನ್ನು 1947ರಲ್ಲಿ ರಚಿಸಲಾಗಿದೆ ಎಂದು ಜನ ನನ್ನ ಬಳಿ ಹೇಳುತ್ತಾರೆ. ಆದರೆ, ಸಂವಿಧಾನ ಸಾವಿರಾರು ವರ್ಷಗಳಷ್ಟು ಹಳೆಯದು ಎಂದು ನಾನು ಅವರಿಗೆ ಹೇಳುತ್ತೇನೆ’ ಎಂಬ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಮುಸ್ಲಿಂ ಸಮುದಾಯದಲ್ಲಿನ ಎಲ್ಲಾ ವರ್ಗಗಳಿಗೂ ಮಂಡಳಿಯಲ್ಲಿ ಅವಕಾಶ ಕೊಡುವ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಬುಧವಾರ ತಡರಾತ್ರಿ 2 ಗಂಟೆಗೆ ಅನುಮೋದನೆ ನೀಡಿದೆ.
ಸಂಸತ್ ಕಲಾಪದ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಡುವೆ ಬುಧವಾರ ಭರ್ಜರಿ ವಾಗ್ವಾದ ನಡೆದಿದೆ. ಬಿರ್ಲಾ ಒಂದು ಹಂತದಲ್ಲಿ ರಾಹುಲ್ ಮೇಲೆ ಕೋಪಗೊಂಡು ‘ಸದನದ ನಿಯಮಗಳನ್ನು ನೀವು ಪಾಲಿಸುತ್ತಿಲ್ಲ. ಹೀಗಾಗಕೂಡದು’ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
2028ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು. ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರನ್ನು ಉದ್ದೇಶಿಸಿ ಹೇಳಿದರು.