ಇಂದಿನಿಂದ ಉಪ ಲೋಕಾಯುಕ್ತ ಬಿ.ವೀರಪ್ಪ ಜಿಲ್ಲಾ ಪ್ರವಾಸ, ವಿವಿಧ ಸ್ಥಳಗಳಿಗೆ ಭೇಟಿ
Apr 22 2025, 01:49 AM ISTನ್ಯಾಯಮೂರ್ತಿ ಹಾಗೂ ರಾಜ್ಯದ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26ರವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.