ಅಬಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Oct 20 2023, 01:01 AM ISTಕನಕಪುರ: ಪ್ರಕರಣವೊಂದರಲ್ಲಿ ವ್ಯಕ್ತಿಯ ಹೆಸರು ಕೈ ಬಿಡುವುದಕ್ಕಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೆಬಲ್ಗಳು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ಮಂಜುನಾಥ್, ಕಾನ್ಸ್ಟೆಬಲ್ಗಳಾದ ಮಾರುತಿ, ರವಿ ಹಾಗೂ ಹಣ ಪಡೆದ ಖಾಸಗಿ ವ್ಯಕ್ತಿ ಬಾಲಾಜಿ ಎಂಬಾತನನ್ನು ಬಂಧಿಸಲಾಗಿದೆ.