ನೀರಾವರಿ ಉಪವಿಭಾಗದ ಎಂಜಿನಿಯರ್ಗಳು ಲೋಕಾಯುಕ್ತ ಬಲೆಗೆ
Dec 20 2023, 01:15 AM ISTಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ಶಿಗ್ಗಾಂವಿ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಶಿಗ್ಗಾಂವಿ ಏತ ನೀರಾವರಿ ಉಪವಿಭಾಗ-1 ಮತ್ತು 2, ಧಾರವಾಡ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ ಬಿ. ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ ಹೊಸಮನಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.