ವಕ್ಫ್ ಸಮಸ್ಯೆ ಪರಿಹಾರಕ್ಕೆ ನಾಳೆ ಹೋರಾಟ
Nov 21 2024, 01:02 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ.22 ರಂದು ನವನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಂದು ಬೆಳಗ್ಗೆಯಿಂದ ಸಂಜೆವರೆಗೆ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸಲಾಗುವುದು. ಜತೆಗೆ ಸಮಸ್ಯೆ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.