ವಕ್ಫ್ ಹೆಸರಲ್ಲಿ ಬಿಜೆಪಿಯಿಂದ ಗೊಂದಲ ಸೃಷ್ಟಿ
Oct 30 2024, 12:45 AM ISTಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಹೆಸರಿನಲ್ಲಿ ಬಿಜೆಪಿಯವರು ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದು, ಕಾಂಗ್ರೆಸ್ನವರು ನೋಟಿಸ್ ಕೊಡುವ ಮೂಲಕ ರೈತರಿಗೆ ತೊಂದರೆ ಮಾಡುತ್ತಿದ್ದೇವೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ ಸಿಎಂ ಆಗಿದ್ದ ವೇಳೆ ರೈತರ ಜಮೀನುಗಳನ್ನು ವಾಪಸ್ ಪಡೆದು, ವಕ್ಫ್ ಆಸ್ತಿ ಎಂದು ಸೇರಿಸಿರುವ ಇತಿಹಾಸ ಇವೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಆರೋಪಿಸಿದರು.