ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಹೊಂಬುಜ ಜೈನ ಮಠದ ಡಾ.ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.
ಜನತೆ ಕೃಷಿ ಚಟುವಟಿಕೆಯಿಂದ ದೂರ ಸರಿಯುತ್ತಿ ದ್ದಾರೆ. ಕೃಷಿ ಚಟುವಟಿಕೆ ಕಡಿಮೆಯಾಗುತ್ತಿದೆ ಎಂಬ ಆತಂಕಗಳ ನಡುವೆಯೇ, ಕಳೆದ ಕೆಲ ವರ್ಷಗಳಿಂದ ಭಾರತದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಜನತೆ ಕೃಷಿ ಚಟುವಟಿಕೆ ಮೇಲೆ ಅವಲಂಬಿತರಾಗುವ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾ ರದ ವರದಿಯೊಂದು ಹೇಳಿದೆ.