ಹೊಳೆನರಸೀಪುರ ಮೆಟ್ರಿಕ್‌ ನಂತರದ ಹಾಸ್ಟೆಲ್‌ ವಾರ್ಡನ್‌ ವರ್ಗಾವಣೆ ಮಾಡಿ

Sep 03 2024, 01:36 AM IST
ಹೊಳೆನರಸೀಪುರ ತಾಲೂಕಿನ ಸಮಾಜಕಲ್ಯಾಣ ಇಲಾಖೆ ಮೆಟ್ರಿಕ್ ನಂತರ ಬಾಲಕೀಯರ ವಿದ್ಯಾರ್ಥಿನಿಲಯ ಅವ್ಯವಸ್ಥೆ ಕೂಪವಾಗಿದೆ. ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಮತ್ತು ಕೊಠಡಿಗಳು ಸೇರಿದಂತೆ ಯಾವುದೇ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಶೈಕ್ಷಣಿಕ ವಾತಾವರಣವಿಲ್ಲದೆ ಹೆಚ್ಚು ಸಮಸ್ಯೆಗಳನ್ನು ಪ್ರತಿನಿತ್ಯ ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ನಿಲಯಪಾಲಕರಾದ ಚಂದ್ರಿಕಾರವರಿಗೆ ಹಲವು ಬಾರಿ ಬಗೆಹರಿಸುವಂತೆ ಒತ್ತಾಯಿಸಿದರೂ ಸಮಸ್ಯೆಗಳನ್ನು ಬಗೆಹರಿಸುವ ಬದಲು ಮಕ್ಕಳ ಮೇಲೆ ಧಮ್ಕಿ ಹಾಕಿ ಬೆದರಿಕೆ ದೌರ್ಜನ್ಯವೆಸಗುತ್ತಿದ್ದಾರೆ. ಈ ಹಾಸ್ಟೆಲ್ ವಾರ್ಡನ್‌ ಅವರನ್ನು ವರ್ಗಾವಣೆ ಮಾಡಿ ಹಾಸ್ಟೆಲ್‌ ವ್ಯವಸ್ಥೆ ಸುಧಾರಿಸುವಂತೆ ಎಸ್‌ಎಫ್ಐ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.