ವಾಲ್ಮೀಕಿ ಸಮಾಜಕ್ಕೆ ಹಕ್ಕು, ಸೌಲಭ್ಯಗಳ ತಲುಪಿಸಿ
Oct 17 2024, 12:51 AM ISTಜಗತ್ತಿಗೆ ರಾಮಾಯಣದಂಥ ಮಹಾನ್ ಕಾವ್ಯವನ್ನು ನೀಡಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಮೂಲಕ ರಾಜ್ಯ ಸರ್ಕಾರ ಗೌರವ ಸಮರ್ಪಿಸುತ್ತಿದೆ. ವಾಲ್ಮೀಕಿ ಜಯಂತಿಯನ್ನು ಕೇವಲ ಸಾಂಕೇತಿಕವಾಗಿ ಆಚರಿಸುವುದಕ್ಕಷ್ಟೇ ಸರ್ಕಾರಗಳು ಸೀಮಿತವಾಗಬಾರದು. ವಾಲ್ಮೀಕಿ ನಾಯಕ ಸಮಾಜಕ್ಕೆ ಸಿಗಬೇಕಾದ ಹಕ್ಕು, ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕೆಲಸ ಮಾಡಬೇಕು ಎಂದು ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.