ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿಯಾಗಿದ್ದಾರೆ. ಆದ್ದರಿಂದ ನೈತಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12 ಮಂದಿ ವಿರುದ್ಧ ನ್ಯಾಯಾಲಯಕ್ಕೆ 3 ಸಾವಿರ ಪುಟಗಳ ಪ್ರಾಥಮಿಕ ಹಂತದ ಆರೋಪ ಪಟ್ಟಿಯನ್ನು ಸೋಮವಾರ ವಿಶೇಷ ತನಿಖಾ ತಂಡ ಸಲ್ಲಿಸಿದೆ.
ಬಜೆಟ್ನಲ್ಲಿ ಕಡಿಮೆ ಅನುದಾನ ನೀಡಿರುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಹಾಗೂ ಮುಡಾ ಹಾಗೂ ವಾಲ್ಮೀಕಿ ಹಗರಣ ವಿಚಾರಗಳ ಬಗ್ಗೆ ಎಐಸಿಸಿ ವರಿಷ್ಠರಿಗೆ ಸತ್ಯಾಂಶ ವಿವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.