ವಾಲ್ಮೀಕಿ ನಿಗಮದ ಹಗರಣ ಸಿಬಿಐ ತನಿಖೆಗೆ ವಹಿಸಲು ಆಗ್ರಹ
Jun 03 2024, 12:31 AM ISTಕನಕಪುರ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ.ನಾಗೇಂದ್ರ ಇಬ್ಬರೂ ರಾಜೀನಾಮೆ ನೀಡಬೇಕು ಹಾಗೂ ಕೂಡಲೇ ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಶಿರಸ್ತೇದಾರ್ ಜಗದೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.