ವಾಲ್ಮೀಕಿ ಈ ನೆಲದ ಸಂಸ್ಕೃತಿಯ ಮಹಾಸಂತ
Oct 29 2023, 01:00 AM ISTಮಹಾಕಾವ್ಯ ರಾಮಾಯಣವನ್ನು ಮಾನವ ಕೋಟಿಗೆ ನೀಡಿ ಮಹಾಮಾರ್ಗದರ್ಶನ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಮುನಿಗಳು ಈ ನೆಲದ ಸಂಸ್ಕೃತಿಯ ಮಹಾಸಂತ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಬಣ್ಣಿಸಿದರು. ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು, ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ ಎಂದರು.