ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಇಂದು
Oct 07 2025, 01:03 AM ISTಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ಅ. 7ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಜರುಗಲಿದೆ.