ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ಗೆ ಪ್ರಕರಣ ದಾಖಲು: ಎಚ್ಚರಿಕೆ
Aug 06 2024, 12:39 AM ISTಕನ್ನಡಪ್ರಭ ವಾರ್ತೆ ಜಮಖಂಡಿ ನಗರ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದರೆ ಅಂಥ ವಾಹನಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಲಾಗುವುದೆಂದು ಶಹರ ಠಾಣೆ ಪಿಎಸ್‌ಐ ಅನಿಲ ಕುಂಬಾರ ಎಚ್ಚರಿಕೆ ನೀಡಿದ್ದಾರೆ.ನಗರದ ಮಾರುಕಟ್ಟೆ ಪ್ರದೇಶ ಮತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿದ್ದನ್ನು ತೆರವು ಗೊಳಿಸಿದ ಅವರು, ಸಾರ್ವಜನಿಕರು ಮತ್ತೊಬ್ಬರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲ್ಲಿಸಬೇಕು ಮತ್ತು ನಿಗದಿತ ದಿನದಂದು ಹೇಳಲಾದ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.