ವಾಹನ ಪಲ್ಟಿ: ಐವರಿಗೆ ಗಾಯ
Apr 01 2024, 12:54 AM ISTಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ಫಾರ್ಚುನರ್ ವಾಹನ ಪಲ್ಟಿ ಆಗಿರುವ ಘಟನೆ ಸಂಜೆ ಜರುಗಿದೆ. ಭಾನುವಾರ ಸಂಜೆ ಎಲ್ಲೇ ಮಾಳ ರಸ್ತೆಯಲ್ಲಿ ಫಾರ್ಚುನರ್ ವಾಹನ ಪಲ್ಟಿ ಯಾದ ವಾಹನದಲ್ಲಿ ಒಂದು ಮಗು ಸೇರಿ ಐವರು ಪ್ರಯಾಣಿಸುತ್ತಿದ್ದರು ಮಲ್ಲಿಕಾರ್ಜುನ್ ಎಂಬ ವ್ಯಕ್ತಿಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಉಳಿದಂತೆ ಎಲ್ಲರೂ ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.