ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಮುಡಾದ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.
ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಕೊಯಮತ್ತೂರಿನ ಸದ್ಗುರು ಅವರ ಈಶ ಫೌಂಡೇಶನ್ನಲ್ಲಿ ತಮ್ಮ ಇಬ್ಬರು ಪುತ್ರಿಯರನ್ನು ಬಂಧಿಯಾಗಿರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.