ಮಾನವ ಹಕ್ಕು ಆಯೋಗಕ್ಕೆ ದೂರು: ಜಿಲ್ಲಾಮಟ್ಟದಲ್ಲಿಯೇ ವಿಚಾರಣೆ
Jun 28 2024, 12:49 AM ISTಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಎಂದು ಆಯೋಗದ ರಾಜ್ಯಾಧ್ಯಕ್ಷ (ಪ್ರಭಾರಿ) ಡಾ. ಶ್ಯಾಮ್ ಭಟ್ ಹೇಳಿದರು.ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಗುರುವಾರ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ, ವಿದ್ಯಾರ್ಥಿನಿಲಯ, ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರ ನವೆಂಬರ್ ಮಾಹೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಹೊಸ ಸಮಿತಿ ರಚನೆಯಾಗಿದ್ದು, ಆಗ ಆಯೋಗದ ಮುಂದೆ 8054 ಪ್ರಕರಣಗಳು ಇದ್ದವು. ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು 3033 ಕೇಸ್ಗಳು ಬಾಕಿ ಇವೆ.