ಬಿಜೆಪಿಗೆ ವಿಜಯೇಂದ್ರ ಹೊಸ ತಂಡ
Dec 24 2023, 01:45 AM ISTಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ಸಂಘಟನೆಗಾಗಿ ಪದಾಧಿಕಾರಿಗಳ ಹೊಸ ತಂಡವನ್ನು ರಚಿಸಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಶನಿವಾರ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಂಡಿದ್ದು, ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಮತ್ತು ಪ್ರತಿಪಕ್ಷ ನಾಯಕ ಸ್ಥಾನ ಎರಡಕ್ಕೂ ಪ್ರಬಲವಾಗಿ ಕೇಳಿಬಂದಿದ್ದ ಮಾಜಿ ಸಚಿವ ಸುನೀಲ್ ಕುಮಾರ್ ರಾಜ್ಯ ಸಮಿತಿಯ ನಾಲ್ವರು ಪ್ರಧಾನ ಕಾರ್ಯದರ್ಶಿಗಳ ಪೈಕಿ ಒಬ್ಬರಾಗಿ ನೇಮಕಗೊಂಡಿದ್ದಾರೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ.