ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ಎಂಬ ನಾಟಕವನ್ನು ಬದಿಗಿಟ್ಟು, ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಕೂಡಲೇ ಶ್ವೇತಪತ್ರ ಪ್ರಕಟಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ತಮ್ಮ ವಿರುದ್ಧ ಚಟುವಟಿಕೆ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರ ಮುಖಂಡರನ್ನು ‘ರೆಬೆಲ್ಸ್’ (ಬಂಡಾಯಗಾರರು) ಎಂಬುದಾಗಿ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.
ಪಕ್ಷದ ಕೆಲವರು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಬಹಿರಂಗವಾಗಿ ತೇಜೋವಧೆ ಮಾಡುತ್ತಿದ್ದರೂ ಪಕ್ಷದ ಹಿರಿಯರು ಸುಮ್ಮನಿರುವುದು ದುರ್ದೈವದ ಸಂಗತಿ. ಈ ವಿಚಾರದಲ್ಲಿ ಸುಮ್ಮನೆ ಕುಳಿತುಕೊಳ್ಳುವುದೂ ಒಂದು ಅಪರಾಧವೇ ಸರಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.
ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಪಕ್ಷಕ್ಕೆ ಚೈತನ್ಯ ಬಂದಿದೆ ಎಂದು ಔರಾದ್ ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ.
ಎಲ್ಲಾ ಹಿರಿಯ ಮುಖಂಡರಿಗೂ ತಿಳಿಸಿ, ಅಧ್ಯಕ್ಷರ ಘೋಷಣೆ ಮಾಡಬೇಕಿತ್ತು, ಆದರೆ ರಾಜ್ಯಾಧ್ಯಕ್ಷ ವಿಜಯೇಂದ್ರ ತಮ್ಮ ಬೆಂಬಲಿಗಾರದ ತಮ್ಮೇಶ್ ಗೌಡರ ಅಣತಿಯಂತೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಏಕಾಪಕ್ಷೀಯವಾಗಿ ಘೋಷಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಬಹಳ ದೊಡ್ಡ ಹಿನ್ನಡೆಯಾಗಿದ್ದು, ಶೀಘ್ರದಲ್ಲೇ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೊಡ್ಡ ಆಘಾತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.