ವಿದ್ಯಾರ್ಥಿ ಮೇಲೆ ಕ್ರಮವಾದರೆ ಹೋರಾಟ
Nov 25 2024, 01:01 AM ISTಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿಯೇ ಹಾಸಿಹೊದ್ದುಕೊಳ್ಳುವಷ್ಟು ಸಮಸ್ಯೆಗಳಿದ್ದು, ಮೊದಲು ಅವುಗಳ ಬಗ್ಗೆ ಗಮನಹರಿಸಬೇಕು. ಅದನ್ನೆಲ್ಲ ಬಿಟ್ಟು ವಿದ್ಯಾಮಂತ್ರಿಗೆ ಕನ್ನಡ ಬರುವುದಿಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿದನ್ನೇ ಗಂಭೀರವಾಗಿ ಪರಿಗಣಿಸಿ ಆತನ ಮೇಲೆ ಕ್ರಮಕ್ಕೆ ಸೂಚಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ನಡೆ ಸರಿಯಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಆಕ್ರೋಶ ವ್ಯಕ್ತಪಡಿಸಿದರು.