ಮಳೆ ರಜೆ ಘೋಷಣೆಯಲ್ಲಿ ತಾರತಮ್ಯ: ವಿದ್ಯಾರ್ಥಿ ವಲಯದಲ್ಲಿ ಅಸಮಾಧಾನ
Jul 07 2024, 01:20 AM ISTಮಳೆ, ಗಾಳಿ, ನೆರೆಯಂತಹ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕಬಾರದು ಎನ್ನುವ ಕಾರಣಕ್ಕಾಗಿ ಮುಂಜಾಗ್ರತೆಯಿಂದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಆದರೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುವ ಸಂದರ್ಭದಲ್ಲಿ ಆಯ್ದ ಸ್ತರದ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸುತ್ತಿದ್ದು, ಉಳಿದ ವಿದ್ಯಾರ್ಥಿಗಳ ಬಗ್ಗೆ ಮಲತಾಯಿ ಧೋರಣೆ ತೋರಿಸಲಾಗುತ್ತಿದೆ.