ವಿದ್ಯಾರ್ಥಿ ದಿಸೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ
Aug 08 2025, 01:00 AM ISTಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಪಠ್ಯದ ಜತೆ ಸಂಗೀತ, ಸಾಹಿತ್ಯ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಬಹುದು. ನವೋದಯ ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಅಧ್ಯಕ್ಷ ಸಿ.ಜೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಇಷ್ಟಪಟ್ಟು ಓದಬೇಕು. ಶಿಸ್ತುಬದ್ಧ ಜೀವನ ಭವಿಷ್ಯದ ಜೀವನಕ್ಕೆ ಸೋಪಾನ ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಕಾರ್ಯದರ್ಶಿ ಕೆ. ಪಿ. ಶರತ್, ಒ.ಆರ್. ರಂಗೇಗೌಡ, ನಿರ್ದೇಶಕರಾದ ಆನಂದ್ ಕಾಳೇನಹಳ್ಳಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.