ಜಪಾನ್ನಲ್ಲಿ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ: ರಿಪಬ್ಲಿಕನ್ ಸೆಂಟ್ರಲ್ ಶಾಲೆ ವಿದ್ಯಾರ್ಥಿಗಳು
May 08 2024, 01:00 AM ISTಜಪಾನ್ ದೇಶದಲ್ಲಿ ಮೇ 29ರಿಂದ ಜೂ.6ರವರೆಗೆ ನಡೆಯಲಿರುವ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ರಿಪಬ್ಲಿಕ್ ಸೆಂಟ್ರಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಆ ದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಶಿಕ್ಷಣ, ತಂತ್ರಜ್ಞಾನ, ಅಲ್ಲಿನ ಪಠ್ಯಕ್ರಮ, ತರಗತಿಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಳ್ಳುವರು.