ದಾಸನಪುರ ಗ್ರಾಮದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರತಿಭಟನೆ

Feb 21 2024, 02:04 AM IST
ಮುತ್ತುರಾಜ್ ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ಬರೆದು ತನ್ನೂರಿಗೆ ವಾಪಸಾಗುವ ವೇಳೆ ಅನ್ಯಕೋಮಿನ ಹುಡುಗರ ಒಂದು ತಂಡ ರತ್ನಪುರಿಯಿಂದ ಗದ್ದಿಗೆಗೆ ತೆರಳುವ ಮಾರ್ಗದಲ್ಲಿ ಅಡ್ಡಹಾಕಿ ಮನಬಂದಂತೆ ಥಳಿಸಿದೆ. ಇದನ್ನು ಕಂಡ ಇತರ ಗೆಳೆಯರು ಮುತ್ತುರಾಜನ ತಂದೆಗೆ ಮಾಹಿತಿ ನೀಡಿದ್ದಾರೆ. ತಂದೆ ರವಿಕುಮಾರ್ ರತ್ನಪುರಿಗೆ ಬಂದು ಅನ್ಯಕೋಮಿನ ಹುಡುಗರನ್ನು ಪ್ರಶ್ನಿಸಿದಾಗ ಒರಟಾಗಿ ಉತ್ತರ ನೀಡಿ ತಮ್ಮ ಬಳಿಯಿದ್ದ ಮುತ್ತುರಾಜನ ಮೊಬೈಲ್‌ ನ್ನು ನೆಲಕ್ಕೆ ಬಿಸಾಡಿ ತೆರಳಿದ್ದಾರೆ. ಸಂಜೆಯವರೆಗೂ ತನ್ನ ಪುತ್ರನಿಗಾಗಿ ಹುಡುಕಾಡಿದ ರವಿಕುಮಾರ್ ದಾಸನಪುರದ ತಮ್ಮ ಜಮೀನಿನ ಪಕ್ಕದ ಜಮೀನಿನಲ್ಲಿರುವ ಶೆಡ್‌ ಗೆ ಅನುಮಾನವಾಗಿ ನೋಡಿದಾಗ ಪುತ್ರನ ದೇಹ ನೇಣಿಗೆ ಶರಣಾದ ಸ್ಥಿತಿಯಲ್ಲಿತ್ತು.