ವಿದ್ಯಾರ್ಥಿ ಸಮೂಹಕ್ಕೆ ದೇಶದ ಪಥ ಬದಲಾಯಿಸುವ ಶಕ್ತಿಯಿದೆ
Nov 24 2023, 01:30 AM ISTವಿದ್ಯಾರ್ಥಿ ಸಮೂಹಕ್ಕೆ ದೇಶದ ಪಥವನ್ನು ಬದಲಾಯಿಸುವ ಶಕ್ತಿಯಿದ್ದು, ಶೈಕ್ಷಣಿಕ ವರ್ಷದ ಪ್ರಮುಖ ಘಟ್ಟವಾಗಿರುವ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿಗಳು ಯಶಸ್ಸಿನ ದಾರಿಯನ್ನು ಸರಳವಾಗಿಸಿಕೊಳ್ಳಿ ಎಂದು ಪುರಸಭೆ ಸದಸ್ಯ ರಾಜು ಸಾಂಗ್ಲಿಕರ ಹೇಳಿದರು.ಪಟ್ಟಣದ ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ''ಕನ್ನಡಪ್ರಭ'' ಪತ್ರಿಕೆಯ ಯುವ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.