ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಕಲಿಕೆಯಲ್ಲಿ ಹೆಚ್ಚು ತೊಡಗಿ
Aug 17 2025, 01:32 AM ISTಪೋಷಕರು ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುತ್ತಿರುವುದರಿಂದ, ಅವರು ಮೊಬೈಲ್‌ಗಳಿಗೆ ಹೆಚ್ಚು ಆಕರ್ಷಿತರಾಗಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು, ಕೌಶಲ್ಯಾಭಿವೃದ್ಧಿ ಮತ್ತು ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಾಲೂಕು ಜನಪದ ಪರಿಷತ್ ಅಧ್ಯಕ್ಷ ಹಾಗು ಹಾಸನದ ಸಂತ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅನಿಲ್ ಬಿ.ಕೆ. ತಿಳಿಸಿದರು. ನೀರಿನಲ್ಲಿ ಮುಳುಗಿದವನನ್ನು ರಕ್ಷಿಸಬಹುದು, ಆದರೆ ಮೊಬೈಲ್‌ನಲ್ಲಿ ಮುಳುಗಿದವನನ್ನು ರಕ್ಷಿಸಲು ಕಷ್ಟ " ಎಂಬ ಹೋಲಿಕೆಯನ್ನು ನೀಡುತ್ತಾ, ಪೋಷಕರು ಜವಾಬ್ದಾರಿಯೊಂದಿಗೆ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಡುವ ಅಗತ್ಯವಿದೆ ಎಂಬ ಸಂದೇಶವನ್ನು ಅವರು ಒತ್ತಿ ಹೇಳಿದರು.