ತಂತ್ರಾಂಶ ದೋಷಕ್ಕೆ ಬೇಸತ್ತ ವಿದ್ಯಾರ್ಥಿಗಳು
Dec 08 2024, 01:16 AM ISTಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದಲ್ಲಿರುವ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಬಂಜಾರಾ ಕ್ರಾಸ್ ಹತ್ತಿರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಸಂಬಂಧಪಟ್ಟ ಯಾವ ಅಧಿಕಾರಿಗಳು ಮನವಿ ಸ್ವೀಕಾರ ಮಾಡದಿರುವುದರಿಂದ ಖಾಲಿ ಕುರ್ಚಿಗೆ ಮನವಿ ಸಲ್ಲಿಸಿದರು.