ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸಿ

Sep 12 2025, 12:06 AM IST
ವಿದ್ಯಾರ್ಥಿನಿಯರು ಈ ವಯಸ್ಸಿನಲ್ಲಿ ಆಕರ್ಷಣೆಗೆ ಒಳಗಾಗುವುದು ಸಹಜ. ಆದರೆ ಅದು ಜೀವನವನ್ನು ಹಾಳು ಮಾಡುವ ಮಾರ್ಗವಾಗಬಾರದು. ಕೆಟ್ಟ ವಿಚಾರಗಳ ಕಡೆ ಮನಸ್ಸು ಕೊಡುವುದನ್ನು ಬಿಟ್ಟು, ಉತ್ತಮ ವಿಚಾರಗಳ ಕಡೆ ಯೋಚಿಸಬೇಕು. ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸಿ, ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬೆಳೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಕಿವಿಮಾತು ಹೇಳಿದರು. ಫೇಲ್ ಆದರೆ ಜೀವನ ಮುಗಿಯುವುದಿಲ್ಲ. ಬದಲಿಗೆ ಅದು ಹೊಸ ಅವಕಾಶಕ್ಕೆ ದಾರಿ ತೋರಬಹುದು. ಆದ್ದರಿಂದ ವಿದ್ಯಾರ್ಥಿಗಳು ಮನಸ್ಸು ಗಟ್ಟಿಗೊಳಿಸಿ ಓದುವುದರ ಕಡೆ ಹೆಚ್ಚು ಗಮನ ಕೊಡಬೇಕು. ಏನಾದರೂ ಸಾಧನೆ ಮಾಡುವ ಛಲವನ್ನು ಬೆಳೆಸಿಕೊಂಡರೆ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಬಹುದು ಎಂದು ಸಲಹೆ ನೀಡಿದರು.