ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ: ವರ್ಣಿತ್ ನೇಗಿ
Jun 06 2024, 12:33 AM ISTಬುಧವಾರ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಸಭಾ ಕಾರ್ಯಕ್ರಮ ನಡೆಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.